ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ (59)ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮುಂಜಾನೆ 7.30ರ ನಂತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.