ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ನ ಮೂರು ದ್ವೀಪಗಳ ಮರುನಾಮಕರಣ ಮಾಡಲು ಉದ್ದೇಶಿಸಲಾಗಿದೆ.
ರೋಸ್, ನೀಲ್ ಮತ್ತು ಹ್ಯಾವ್ಲಾಕ್ ದ್ವೀಪಗಳ ಹೆಸರನ್ನು ಕ್ರಮವಾಗಿನೇತಾಜಿ ಸುಭಾಷ್ ಚಂದ್ರ ಬೋಸ್ , ಶಹೀದ್ ಮತ್ತು ಸ್ವರಾಜ್ ದ್ವೀಪಗಳೆಂದು ಮರುನಾಮಕರಣ ಮಾಡಲಾಗುವುದು.
ಇದೇ 30 ರಂದು ಪೋರ್ಟ್ಬ್ಲೇರ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಹೆಸರುಗಳನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಮೂರು ದ್ವೀಪಗಳ ಹೆಸರು ಬದಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.