ಹೈದರಾಬಾದ್: ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಒದಗಿಸುವಂತಹ, ‘ಆಂಧ್ರ ಪ್ರದೇಶ ಮುನ್ಸಿಪಲ್ ಕಾನೂನು ತಿದ್ದುಪಡಿ ಕಾಯಿದೆ 2024’ ಅನ್ನು ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯು ಸೋಮವಾರ ಅಂಗೀಕರಿಸಿತು. ಮಸೂದೆಗೆ ಆಗಸ್ಟ್‌ನಲ್ಲಿ ಅನುಮೋದನೆ ನೀಡಲಾಗಿತ್ತು.
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಿದ್ದ ‘ಆಂಧ್ರ ಪ್ರದೇಶ ಪಂಚಾಯತ್ ರಾಜ್ ಕಾಯಿದೆ–1994’ಕ್ಕೆ ತಿದ್ದುಪಡಿ ಮಾಡಲಾಗಿದೆ. ಇದೀಗ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರೂ ಸ್ಥಳೀಯ ಚುನಾವಣೆಗೆ ಸ್ಪರ್ಧಿಸಬಹುದಾದ ಅವಕಾಶ ದೊರೆಯಲಿದೆ.
ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಳದ ಅಗತ್ಯವನ್ನು ಪ್ರಸ್ತಾಪಿಸಿ ಪೌರಾಡಳಿತ ಸಚಿವ ಪಿ. ನಾರಾಯಣ ಅವರು ಮಸೂದೆಯನ್ನು ಮಂಡಿಸಿದರು. ‘ವಿಧಾನ ಪರಿಷತ್ತಿನ ಒಪ್ಪಿಗೆ ಬಳಿಕ ಸರ್ಕಾರಿ ಆದೇಶವನ್ನು ಹೊರಡಿಸುವ ಮೂಲಕ ಹೊಸ ನಿಯಮ ಜಾರಿಗೆ ಬರಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.