ADVERTISEMENT

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಪಿಟಿಐ
Published 22 ಸೆಪ್ಟೆಂಬರ್ 2023, 10:40 IST
Last Updated 22 ಸೆಪ್ಟೆಂಬರ್ 2023, 10:40 IST
ಎನ್‌. ಚಂದ್ರಬಾಬು ನಾಯ್ಡು
ಎನ್‌. ಚಂದ್ರಬಾಬು ನಾಯ್ಡು   

ಅಮರಾವತಿ: ಕೌಶಲ ಅಭಿವೃದ್ಧಿ ನಿಗಮದ ಹಣ ದುರಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ತೆಲುಗು ದೇಶಂ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಾಯ್ಯಾಂಗ ಬಂಧನವನ್ನು ಸೆಪ್ಟೆಂಬರ್‌ 24ರವರೆಗೆ ವಿಸ್ತರಿಸಿ ಆಂಧ್ರ ಪ್ರದೇಶ ನ್ಯಾಯಾಲಯ ಆದೇಶಿಸಿದೆ.

ಭ್ರಷ್ಟಾಚಾರ ನಿಗ್ರಹ ದಳದ ವಿಶೇಷ ನ್ಯಾಯಾಲಯವು ಚಂದ್ರಬಾಬು ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳ ಕಾಲ ವಿಸ್ತರಿಸಿದೆ ಎಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪೊನ್ನವೋಲು ಅವರು ತಿಳಿಸಿದ್ದಾರೆ.

ಕೌಶಲ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ರಾಜ್ಯದ ಬೊಕ್ಕಸಕ್ಕೆ ₹300 ಕೋಟಿ ನಷ್ಟವಾಗಿದೆ ಎಂಬ ಆರೋಪದ ಮೇಲೆ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್‌ 9 ರಂದು ಸಿಐಡಿ ಪೊಲೀಸರು ಬಂಧಿಸಿದ್ದರು. ಸದ್ಯ ಅವರನ್ನು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.