ADVERTISEMENT

ಆಂಧ್ರ ಪ್ರದೇಶ | ಅತ್ಯಾಚಾರಕ್ಕೊಳಗಾದ ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ

ಪಿಟಿಐ
Published 16 ಜುಲೈ 2024, 4:57 IST
Last Updated 16 ಜುಲೈ 2024, 4:57 IST
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು   

ಅಮರಾವತಿ: ನಂದ್ಯಾಲ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಜುಲೈ 7ರಂದು ಉದ್ಯಾನವನದಲ್ಲಿ ಆಟ ಆಡಲು ತೆರಳಿದ್ದ ಒಂಬತ್ತು ವರ್ಷದ ಬಾಲಕಿಯ ಮೇಲೆ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಕಾಲುವೆಗೆ ಎಸೆದಿದ್ದರು.

ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ₹10 ಲಕ್ಷ ಹಣಕಾಸಿನ ನೆರವು ಘೋಷಣೆ ಮಾಡಿದ್ದಾರೆ ಎಂದು ಗೃಹ ಸಚಿವೆ ವಿ. ಅನಿತಾ ತಿಳಿಸಿದ್ದಾರೆ.

ADVERTISEMENT

ಬಾಲಕಿಯ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.