ADVERTISEMENT

ವಿಜಯವಾಡ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಘೋಷಿಸಿದ ಜಗನ್

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 5:52 IST
Last Updated 9 ಆಗಸ್ಟ್ 2020, 5:52 IST
ಜಗನ್ ಮೋಹನ್ ರೆಡ್ಡಿ
ಜಗನ್ ಮೋಹನ್ ರೆಡ್ಡಿ   

ವಿಜಯವಾಡ: ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೋವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದ ಹೋಟೆಲ್‌ವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ₹50 ಲಕ್ಷ ಪರಿಹಾರಧನ ಘೋಷಿಸಿದ್ದಾರೆ.

ಈ ಬಗ್ಗ ತನಿಖೆ ನಡೆಸುವಂತೆ ಆದೇಶಿಸಿದ ಅವರು ಗಾಯಗೊಂಡಿವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೋಟೆಲ್‌ನ್ನು ಭೋಗ್ಯಕ್ಕೆ ತೆಗೆದುಕೊಂಡಿದ್ದು ಖಾಸಗಿ ಆಸ್ಪತ್ರೆಯಾಗಿರುವ ರಮೇಶ್ ಹಾಸ್ಪಿಟಲ್‌ನ ರೋಗಿಗಳಿಗೆಅಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆ ವೇಳೆ 40 ರೋಗಿಗಳು ಮತ್ತು 10 ವೈದ್ಯಕೀಯ ಸಿಬ್ಬಂದಿಗಳು ಅಲ್ಲಿದ್ದರು. ತಕ್ಷಣವೇ ರಕ್ಷಣಾ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಆಂಧ್ರಪ್ರದೇಶದ ಗೃಹ ಸಚಿವೆ ಸುಚರಿತಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.