ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ಸರ್ಕಾರವು ಹೊಸ ಮದ್ಯ ನೀತಿಯನ್ನು ಪ್ರಕಟಿಸಿದೆ.
ಹರಿಯಾಣ ಮತ್ತು ಇತರೆ ರಾಜ್ಯಗಳ ಮಾದರಿಯಲ್ಲಿ ಖಾಸಗಿ ಚಿಲ್ಲರೆ ವ್ಯಾಪಾರಿಗಳಿಗೆ ಮದ್ಯ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಇದರಿಂದಾಗಿ ಸರ್ಕಾರವು ₹5,500 ಕೋಟಿ ಆದಾಯ ಗಳಿಸುವ ನಿರೀಕ್ಷೆ ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಇತರ ರಾಜ್ಯಗಳಲ್ಲಿ ಇರುವ ಉತ್ತಮ ಅಬಕಾರಿ ನೀತಿಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ ಬಳಿಕ ಹೊಸ ಮದ್ಯ ನೀತಿಯನ್ನು ಜಾರಿಗೆ ತರಲಾಗಿದೆ. ಆಂಧ್ರಪ್ರದೇಶ ಸರ್ಕಾರವು ರಾಜ್ಯದಾದ್ಯಂತ 3,736 ಮದ್ಯದ ಮಾರಾಟ ಮಳಿಗೆಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿದೆ.
ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಹೊಸ ನೀತಿಯು ಇದೇ ಅಕ್ಟೋಬರ್ 12ರಿಂದ ಜಾರಿಗೆ ಬರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.