ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ‘ಹಿಂದುತ್ವದ ನಾಯಕಿ’ ಎಂದು ಪ್ರತಿಪಾದಿಸಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಎಐಎಡಿಎಂಕೆ ನಾಯಕರು ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವರಾದ ಡಿ.ಜಯಕುಮಾರ್ ಮತ್ತು ಆರ್.ಬಿ. ಉದಯಕುಮಾರ್, ಒಂದೇ ಧರ್ಮದಲ್ಲಿ ನಂಬಿಕೆ ಹೊಂದಿರುವ ಅಣ್ಣಾಮಲೈ, ಮೃತಪಟ್ಟ ನಾಯಕರ ಬಗ್ಗೆ ತಪ್ಪು ಗ್ರಹಿಕೆ ಬರುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಒತ್ತಾಯಿಸಿದರು.
‘ಜಯಲಲಿತಾ ದೇವರಲ್ಲಿ ನಂಬಿಕೆಯುಳ್ಳವರಾಗಿದ್ದರು. ಆದರೆ, ಧರ್ಮದಲ್ಲಿ ನಂಬಿಕೆ ಹೊಂದಿರಲಿಲ್ಲ. ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುತ್ತಿದ್ದರು. ಅಂಥ ನಾಯಕರನ್ನು ಯಾರೊಬ್ಬರೂ ಸಂಕುಚಿತರಾಗಿಸಲು ಸಾಧ್ಯವಿಲ್ಲ’ ಎಂದು ಜಯಲಲಿತಾ ಅವರ ಒಡನಾಡಿಯಾಗಿದ್ದ ವಿ.ಕೆ. ಶಶಿಕಲಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.