ಮುಂಬೈ: ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು ಪುಣೆಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ (ಎಫ್‌ಟಿಐಐ) ಮುಖ್ಯಸ್ಥನ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಒಂದು ಶೋ ನಿಮಿತ್ತ ಅಮೆರಿಕಕ್ಕೆ ಹೋಗಬೇಕಾದ ಕಾರಣ ಈ ರಾಜೀನಾಮೆ ನೀಡುತ್ತಿದ್ದೇನೆ. 2018 ರಿಂದ 2019ರವರೆಗೆ ಅಂದರೆ ಸುಮಾರು 9 ತಿಂಗಳ ಕಾಲ ಇಲ್ಲಿಯೇ ಉಳಿಯಬೇಕಾಗಿದೆ. ಸ್ಮೃತಿ ಇರಾನಿ ಅವರು ನನ್ನನ್ನು ಮುಖ್ಯಸ್ಥನ ಸ್ಥಾನಕ್ಕೆ ನೇಮಿಸುವಾಗಲೇ ಈ ವಿಚಾರವನ್ನು ಅವರಿಗೆ ತಿಳಿಸಿದ್ದೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.