ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಸೋಮವಾರ ಹಿಂದೆ ಸರಿದಿದ್ದಾರೆ.
ಅವರು ಕರ್ನಾಟಕ ಮೂಲದವರು.
ಪ್ರಕರಣದ ವಿಚಾರಣೆ ಸೋಮವಾರ ನಿಗದಿಯಾಗಿತ್ತು. ಅವರು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿರುವುದರಿಂದ ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದಾರೆ. ಪ್ರಕರಣ ಹೊಸ ಪೀಠದ ಎದುರು ವಿಚಾರಣೆಗೆ ಬರಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.