ADVERTISEMENT

ನಕ್ಸಲರಿಗೆ ಶಸ್ತ್ರಾಸ್ತ್ರ, ಮದ್ದುಗುಂಡು ಪೂರೈಕೆ; ಆರೋಪಿ ಬಂಧನ

ಪಿಟಿಐ
Published 3 ಸೆಪ್ಟೆಂಬರ್ 2021, 5:54 IST
Last Updated 3 ಸೆಪ್ಟೆಂಬರ್ 2021, 5:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ನಕ್ಸಲಿಗರಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೂರೈಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.

‘ಬಂಧಿತನನ್ನು ಬಿಹಾರದ ಭೋಜಪುರದ ನಿವಾಸಿ ರಾಮ್‌ ಕಿಶನ್‌ ಸಿಂಗ್‌ ಎಂದು ಗುರುತಿಸಲಾಗಿದ್ದು, ಆತನಿಂದ ಒಟ್ಟು 5 ಪಿಸ್ತೂಲ್‌ಗಳು ಮತ್ತು 200 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ವಿಶೇಷ ಘಟಕದ ಉಪ ಪೊಲೀಸ್‌ ಆಯುಕ್ತ ಪ್ರಮೋದ್‌ ಸಿಂಗ್‌ ಕುಶ್ವಾ ಅವರು ಹೇಳಿದರು.

‘ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮತ್ತು ಒಡಿಶಾ, ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿರುವ ನಕ್ಸಲರು ಹಾಗೂ ಬಿಹಾರ, ದೆಹಲಿ ಮತ್ತು ಎನ್‌ಸಿಆರ್‌ನ ಅಪರಾಧಿಗಳಿಗೆ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಆರೋಪದಡಿ ರಾಮ್ ಸಿಂಗ್‌ನನ್ನು ಬಂಧಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.