ADVERTISEMENT

ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ | ಮೂವರ ಬಂಧನ: 20ಕ್ಕೆ ಏರಿದ ಬಂಧಿತರ ಸಂಖ್ಯೆ

ಪಿಟಿಐ
Published 28 ಜುಲೈ 2024, 9:00 IST
Last Updated 28 ಜುಲೈ 2024, 9:00 IST
<div class="paragraphs"><p>ಕೆ.ಆರ್ಮ್‌ಸ್ಟ್ರಾಂಗ್</p></div>

ಕೆ.ಆರ್ಮ್‌ಸ್ಟ್ರಾಂಗ್

   

(ಪಿಟಿಐ ಚಿತ್ರ)

ಚೆನ್ನೈ: ತಮಿಳುನಾಡಿನ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ADVERTISEMENT

ಎನ್. ವಿಜಯಕುಮಾರ್(21) ವಿ. ಮುಕಿಲನ್ (32) ಮತ್ತು ಎನ್. ವಿಘ್ನೇಶ್(27) ಬಂಧಿತ ಆರೋಪಿಗಳು. ಇವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊಲೆ ಪ್ರಕರಣದ ತನಿಖೆ ಮುಂದುವರೆದಿದ್ದು, ಈ ಮೂವರು ಆರೋಪಿಗಳು ಸೇರಿ ಈವರೆಗೆ 20 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 5ರಂದು ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಎಐಎಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.