ಇಂಫಾಲ್: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಮಣಿಪುರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಪರಿಶೀಲಿಸಿದರು ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ದ್ವಿವೇದಿ ಅವರು ಮಣಿಪುರಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಿದ್ದು, ಶನಿವಾರ ಪೂರ್ವ ಸೇನಾ ಕಮಾಂಡರ್ ಅವರೊಂದಿಗೆ ಗಡಿಯಲ್ಲಿ ಭದ್ರತೆಯ ಕುರಿತು ಪರಿಶೀಲಿಸಿದರು. ಶಾಂತಿ ಮತ್ತು ಸಾಮರಸ್ಯ ಕಾಪಾಡಲು ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಕೈಗೊಂಡ ಕ್ರಮಗಳನ್ನು ಅವರು ಶ್ಲಾಘಿಸಿದರು. ಹಿರಿಯ ಸೈನಿಕರೊಂದಿಗೆ ಸಂವಾದ ನಡೆಸಿ, ದೇಶಕ್ಕಾಗಿ ಅವರು ನೀಡುತ್ತಿರುವ ಕೊಡುಗೆಯನ್ನು ಪ್ರಶಂಸಿದರು ಎಂದು ತಿಳಿಸಿದೆ.
ಶುಕ್ರವಾರ ಮಣಿಪುರ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರೊಂದಿಗೆ ಸಂವಾದ ನಡೆಸಿದ್ದರು. ಈ ಪ್ರದೇಶದ ಶಾಂತಿ ಸುವ್ಯವಸ್ಥೆ ಬಗ್ಗೆ ಭಾರತೀಯ ಸೇನೆಗಿರುವ ಬದ್ಧತೆ ಕುರಿತು ವಿವರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.