ADVERTISEMENT

ಜಮ್ಮು–ಕಾಶ್ಮೀರ | ಶಂಕಾಸ್ಪದ ಚಟುವಟಿಕೆ: ವ್ಯಕ್ತಿ ಬಂಧನ

ಪಿಟಿಐ
Published 24 ಜೂನ್ 2024, 15:22 IST
Last Updated 24 ಜೂನ್ 2024, 15:22 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಮೆಂಧರ್‌/ ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ಶಂಕಾಸ್ಪದ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು  ಸೈನಿಕರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೈನಿಕರು ಧರಿಸುವ ರೀತಿಯ ಶರ್ಟ್‌ ಮತ್ತು ಖಾಕಿ ಪ್ಯಾಂಟ್‌ ಧರಿಸಿದ್ದ ವ್ಯಕ್ತಿಯನ್ನು ಮಂಕೋಟೆ ಸೆಕ್ಟರ್‌ ಬಳಿ ಬಂಧಿಸಲಾಗಿದೆ. ಆತನ ಬಳಿ ಇದ್ದ ಬಟ್ಟೆಗಳ ರಾಶಿಯನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ಬಂಧಿತ ಆರೋಪಿಯು ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ. ಹೆಚ್ಚಿನ ವಿಚಾರಣೆಗೆ ಆತನನ್ನು ಮೆಂಧರ್‌ ಪೊಲೀಸ್‌ ಠಾಣೆಯ ಸಿಬ್ಬಂದಿ ವಶಕ್ಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.