ADVERTISEMENT

ಸಿಕ್ಕಿಂನಲ್ಲಿ ಸಿಲುಕಿದ್ದ 1,200 ಪ್ರವಾಸಿಗರ ರಕ್ಷಣೆ

ಪಿಟಿಐ
Published 14 ಡಿಸೆಂಬರ್ 2023, 13:58 IST
Last Updated 14 ಡಿಸೆಂಬರ್ 2023, 13:58 IST
   

ಗ್ಯಾಂಗ್ಟಕ್‌: ಹಿಮಪಾತ ಮತ್ತು ಪ್ರಕ್ಷುಬ್ಧ ಹವಾಮಾನದ ಪರಿಣಾಮ ಪೂರ್ವ ಸಿಕ್ಕಿಂನ ಅತಿ ಎತ್ತರದ ಪ್ರದೇಶದಲ್ಲಿ ಸಿಲುಕಿದ್ದ 1,217 ಮಂದಿಯನ್ನು ಭಾರತೀಯ ಸೇನೆ ರಕ್ಷಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸೇನೆಯ ತ್ರಿಶಕ್ತಿ ಪಡೆಯು ಬುಧವಾರ ತಡರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿತು. ಅಲ್ಲಿ ಅವರಿಗೆ ಬೆಚ್ಚನೆಯ ಬಟ್ಟೆ, ಹೊದಿಕೆ, ಊಟ,  ವೈದ್ಯಕೀಯ ನೆರವು ಒದಗಿಸಲಾಗಿದೆ. ಅಲ್ಲದೆ ಅವರು ರಾಜಧಾನಿ ಗ್ಯಾಂಗ್ಟಕ್‌ಗೆ ಮರಳಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT