ADVERTISEMENT

ಭಾರತೀಯ ಸೇನೆಯ 10 ದಂಡು ಪ್ರದೇಶಗಳು ಸ್ಥಳೀಯಾಡಳಿತಕ್ಕೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 16:07 IST
Last Updated 1 ಸೆಪ್ಟೆಂಬರ್ 2024, 16:07 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ದೇಶದ ವಿವಿಧೆಡೆ ಇರುವ 10 ದಂಡು ಪ್ರದೇಶಗಳನ್ನು ಆಯಾ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಲು ಭಾರತೀಯ ಸೇನೆ ನಿರ್ಧರಿಸಿದೆ.

ಹಸ್ತಾಂತರಕ್ಕೆ ಅಗತ್ಯವಿರುವ ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ಸೇನೆಯ ಮೂರು ಕಮಾಂಡ್‌ಗಳು ಕಾರ್ಯಪ್ರವೃತ್ತವಾಗಿವೆ ಎಂದು ಮೂಲಗಳು ಹೇಳಿವೆ.

ADVERTISEMENT

ಡೆಹ್ರಾಡೂನ್‌, ದೇವಲಾಲಿ, ನಾಸಿರಾಬಾದ್‌, ಬಿಬಿನಾ, ಅಜ್ಮೇರ್‌, ರಾಮಗಢ, ಮಥುರಾ, ಶಹಜಹಾನ್‌ಪುರ, ಕ್ಲೆಮೆಂಟ್‌ ಟೌನ್‌ ಹಾಗೂ ಫತೇಹಗಢದಲ್ಲಿರುವ ದಂಡುಪ್ರದೇಶಗಳನ್ನು ಹಸ್ತಾಂತರ ಮಾಡಲಾಗುತ್ತದೆ.

ದಂಡು ಪ್ರದೇಶಗಳನ್ನು ಆಯಾ ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ನೀಡುವುದಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಧಾರ ಕೈಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.