ADVERTISEMENT

ಜಮ್ಮು–ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಅಕ್ಟೋಬರ್ 2024, 4:16 IST
Last Updated 28 ಅಕ್ಟೋಬರ್ 2024, 4:16 IST
<div class="paragraphs"><p>ಸೇನಾ ಸಿಬ್ಬಂದಿ </p></div>

ಸೇನಾ ಸಿಬ್ಬಂದಿ

   

ಸಾಂದರ್ಭಿಕ ಚಿತ್ರ – ಪಿಟಿಐ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖನೂರ್‌ನ ಬತ್ತಲ್‌ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.

ADVERTISEMENT

ಈವರೆಗೆ ಯಾವುದೇ ಸಾವು–ನೋವಿನ ವರದಿಯಾಗಿಲ್ಲ. ದಾಳಿಕೋರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಲ್ಲೇಖಿಸಿದೆ.

ಉತ್ತರ ಕಾಶ್ಮೀರದ ಗುಲ್ಮಾರ್ಗ್‌ ಮತ್ತು ಬೋಟಾ ಪಥ್ರಿ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಗುರುವಾರ ನಡೆದ ದಾಳಿಯಲ್ಲಿ ಮೂವರು ಸೈನಿಕರು ಸೇರಿ ಐವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ, ಇಂದು ಹೊಸದಾಗಿ ದಾಳಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.