ಶ್ರೀನಗರ: ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ ಇಂದಿಗೆ (ಆಗಸ್ಟ್ 5) 5 ವರ್ಷಾಗಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಸೇನಾ ಪಡೆಗಳ ವಾಹನಗಳು ಸಂಚರಿಸದಂತೆ ಎಲ್ಲಾ ರಕ್ಷಣಾ ಪಡೆಗಳಿಗೆ ನಿರ್ದೇಶಿಸಲಾಗಿದೆ.
ಆಗಸ್ಟ್ 5ರಂದು ಭದ್ರತಾ ಪಡೆಗಳ ಬೆಂಗಾವಲು ವಾಹನಗಳು ಸಂಚರಿಸಬಾರದು. ಅಮರನಾಥ ಯಾತ್ರೆಯ ವಿವಿಧ ಬೇಸ್ ಕ್ಯಾಂಪ್‌ಗಳಿಂದ ಬೆಂಗಾವಲು ವಾಹನಗಳ ಸಂಚಾರವೂ ಇರಬಾರದು ಎಂದು ಸಲಹೆ ನೀಡಲಾಗಿದೆ.
ಅಮರನಾಥ ಯಾತ್ರೆ ರಸ್ತೆ ತೆರವು ಮಾಡುವ ಏಜೆನ್ಸಿಗಳಿಗೆ ಎಂದಿನಂತೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.
2019ರ ಆಗಸ್ಟ್ 5 ರಂದು ಸಂವಿಧಾನದ 370ನೇ ವಿಧಿಯಡಿ ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಅಲ್ಲದೇ ಜಮ್ಮು ಕಾಶ್ಮೀರ ಮರು ಸಂಘಟನೆ ಕಾಯ್ದೆ ಜಾರಿಗೆ ತಂದು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.