ADVERTISEMENT

ವಿಶೇಷ ಸ್ಥಾನಮಾನ: ಕೇಂದ್ರ ಮಾತ್ರ ಮರುಸ್ಥಾಪಿಸಲು ಸಾಧ್ಯ- ಗುಲಾಂ ನಬಿ ಆಜಾದ್‌

ಪಿಟಿಐ
Published 28 ಸೆಪ್ಟೆಂಬರ್ 2024, 15:37 IST
Last Updated 28 ಸೆಪ್ಟೆಂಬರ್ 2024, 15:37 IST
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್   

ಜಮ್ಮು: ಕೇಂದ್ರ ಸರ್ಕಾರ ಮಾತ್ರ, ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ನೀಡಲಾಗುವ ವಿಶೇಷ ಸ್ಥಾನಮಾನ ಮರುಸ್ಥಾಪನೆ ಮಾಡಬಹುದು ಎಂದು ಡೆಮಾಕ್ರಟಿಕ್ ಪ್ರಗತಿಪರ ಆಜಾದ್‌ ಪಕ್ಷದ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್‌ ಹೇಳಿದ್ದಾರೆ.

‘ಜಮ್ಮು–ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡಲಾಗುವುದು’ ಎಂದು ಹೇಳುತ್ತಿರುವ ನ್ಯಾಷನಲ್‌ ಕಾನ್ಫರೆನ್ಸ್‌(ಎನ್‌ಸಿ) ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಅವರು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಲು ಬದ್ಧ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈಗಾಗಲೇ ಹೇಳಿದ್ದಾರೆ’ ಎಂದರು

ADVERTISEMENT

‘ನ್ಯಾಷನಲ್‌ ಕಾನ್ಫರೆನ್ಸ್‌ ಆಗಲಿ ಇಲ್ಲವೇ ಪಿಡಿಪಿಯಾಗಲಿ ಸಂವಿಧಾನದ 370ನೇ ವಿಧಿ ಮತ್ತು ರಾಜ್ಯ ಸ್ಥಾನಮಾನ ವಿಚಾರವಾಗಿ ಸಂಸತ್‌ನಲ್ಲಿ ಮಾತನಾಡಿಲ್ಲ. ಈ ಕುರಿತು ನಾನು ಮಾತನಾಡಿದ್ದೇನೆ. ರಾಜ್ಯ ಸ್ಥಾನಮಾನ ಮರುಸ್ಥಾಪಿಸುವುದಾಗಿ ಪ್ರಧಾನಿ ಮತ್ತು ಗೃಹ ಸಚಿವರು ಹೇಳಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.