ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 1980ರ ನಂತರದಲ್ಲಿ ಸರ್ಕಾರದ ಕಡೆಯಿಂದ ಹಾಗೂ ಸರ್ಕಾರೇತರ ಶಕ್ತಿಗಳಿಂದ ನಡೆದಿರುವ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ನಿಷ್ಪಕ್ಷಪಾತಿಯಾದ ‘ಸತ್ಯಶೋಧನೆ ಮತ್ತು ಸಾಮರಸ್ಯ ಆಯೋಗ’ ರಚಿಸಬೇಕು ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ತಮ್ಮ ಪ್ರತ್ಯೇಕ ತೀರ್ಪಿನಲ್ಲಿ ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ ಕೌಲ್ ಅವರು ಪ್ರತ್ಯೇಕ ತೀರ್ಪು ಬರೆದಿದ್ದರೂ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕೇಂದ್ರದ ತೀರ್ಮಾನ ಸರಿ ಎಂದು ಹೇಳಿದ್ದಾರೆ. ಕೌಲ್ ಅವರು ಜಮ್ಮು ಮತ್ತು ಕಾಶ್ಮೀರದವರು. ಹಿಂಸಾಚಾರಗಳಿಗೆ ಅಲ್ಲಿನ ಜನ ಭಾರಿ ಬೆಲೆ ತೆತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
‘ಈ ಪ್ರದೇಶದ ಜನ ಅನುಭವಿಸಿದ್ದನ್ನು ಕಂಡು ನನಗೆ ನೋವಾಗುತ್ತದೆ. ಹೀಗಾಗಿ ನಾನು ಈ ಉಪಸಂಹಾರವನ್ನು ಬರೆಯಬೇಕಾಗಿದೆ’ ಎಂದು ತಮ್ಮ ತೀರ್ಪಿನ ಕೊನೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.