ADVERTISEMENT

ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಮುಖ್ಯಮಂತ್ರಿ ಸೇರಿ 10 ಮಂದಿ ಅವಿರೋಧ ಆಯ್ಕೆ

ಪಿಟಿಐ
Published 30 ಮಾರ್ಚ್ 2024, 16:27 IST
Last Updated 30 ಮಾರ್ಚ್ 2024, 16:27 IST
ಚುನಾವಣಾ ಆಯೋಗ  
ಚುನಾವಣಾ ಆಯೋಗ     

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪ್ರೇಮಾ ಖಂಡು ಮತ್ತು ಉಪಮುಖ್ಯಮಂತ್ರಿ ಛೌನಾ ಮೇನ್ ಸೇರಿದಂತೆ ಬಿಜೆಪಿಯ 10 ಅಭ್ಯರ್ಥಿಗಳು ವಿಧಾನಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಪವನ್ ಕುಮಾರ್ ಸೈನ್ ಶನಿವಾರ ತಿಳಿಸಿದರು. 

ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಬ್ಬರೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರೆ, ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಎದುರಾಳಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಅವರು ಹೇಳಿದರು.

ಮುಕ್ತೋ ಕ್ಷೇತ್ರದಿಂದ ಪ್ರೇಮಾ ಖಂಡು ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಛೌಕಾಮ್ ಕ್ಷೇತ್ರದಿಂದ ಛೌನಾ ಮೇನ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ನಾಮಪತ್ರ ವಾಪಸ್ ಪಡೆದಿದ್ದರು.

ADVERTISEMENT

2010ರಲ್ಲಿ ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ದೋರ್ಜಿ ಖಂಡು ನಿಧನದ ನಂತರ ನಡೆದ ಉಪ ಚುನಾವಣೆಯಲ್ಲಿ ಪ್ರೇಮಾ ಖಂಡು ಕಾಂಗ್ರೆಸ್ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರು 2014 ಮತ್ತು 2019ರ ವಿಧಾನಸಭಾ ಚುನಾವಣೆಗಳಲ್ಲಿ ಭಾರಿ ಅಂತರದಿಂದ ಜಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.