ADVERTISEMENT

ಜಾಮೀನು ಅವಧಿ ವಿಸ್ತರಣೆ ಕೋರಿದ ಕೇಜ್ರಿವಾಲ್: ಇದು ‘ನಾಟಕ’ವೆಂದು ಕಾಲೆಳೆದ ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮೇ 2024, 12:33 IST
Last Updated 27 ಮೇ 2024, 12:33 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ದೇಹದ ತೂಕವು ಇದ್ದಕ್ಕಿದ್ದಂತೆ ಕಡಿಮೆ ಆಗಿರುವ ಪರಿಣಾಮ ಕೀಟೊನ್ ಮಟ್ಟವು ಹೆಚ್ಚಾಗಿದೆ. ಇವು ಮೂತ್ರಕೋಶದ ಸಮಸ್ಯೆ, ಹೃದಯದ ಗಂಭೀರ ಸಮಸ್ಯೆ ಅಥವಾ ಕ್ಯಾನ್ಸರ್‌ನ ಸೂಚಕಗಳಿರಬಹುದು. ಇದರಿಂದಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕಿರುವುದರಿಂದ ಸಿಎಂ ಅರವಿಂದ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಅವಧಿಯನ್ನು ಒಂದು ವಾರ ವಿಸ್ತರಿಸುವಂತೆ ಕೋರಿದ್ದಾರೆ ಎಂದು ಸಚಿವೆ ಅತಿಶಿ ಹೇಳಿದ್ದಾರೆ.

ADVERTISEMENT

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ 21 ದಿನಗಳ ಮಧ್ಯಂತರ ಜಾಮೀನನ್ನು ಮೇ 10ರಂದು ಮಂಜೂರು ಮಾಡಿತ್ತು.

ಕೇಜ್ರಿವಾಲ್ ಅವರು ಜೂನ್ 2ರಂದು ಶರಣಾಗಬೇಕು ಎಂದು ಮಧ್ಯಂತರ ಜಾಮೀನು ನೀಡುವಾಗ ತಾಕೀತು ಮಾಡಿತ್ತು. ಜೂನ್‌ 2ರ ಬದಲು ಜೂನ್‌ 9ಕ್ಕೆ ಜೈಲಿಗೆ ಮರಳುವುದಾಗಿ ಕೇಜ್ರಿವಾಲ್‌ ಅವರು ಅರ್ಜಿಯಲ್ಲಿ ಹೇಳಿದ್ದಾರೆ.

‘ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಕೇಜ್ರಿವಾಲ್ ಅವರು ನಾಟಕವಾಡುತ್ತಿದ್ದಾರೆ’ ಎಂದು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ದೂರಿದ್ದಾರೆ.

‘ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡಿತ್ತು. ಆ ಕೆಲಸವನ್ನು ಅವರು (ಕೇಜ್ರಿವಾಲ್‌) ಯಾವುದೇ ತೊಂದರೆಯಿಲ್ಲದೆ ಮಾಡಿದ್ದಾರೆ. ಆದರೆ, ಪ್ರಚಾರ ಮುಗಿದ ಕೂಡಲೇ ಇದೀಗ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದಲ್ಲಿ ಸದ್ಯ ಪಂಜಾಬ್‌ನಲ್ಲಿ ಪ್ರಚಾರದಲ್ಲಿ ನಿರತರಾಗುವ ಬದಲು ವೈದ್ಯಕೀಯ ಪರೀಕ್ಷೆಗಳನ್ನು ಏಕೆ ಮಾಡಿಸಲಿಲ್ಲ’ ಎಂದು ಸಚ್‌ದೇವ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.