ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡಿನ ಬದಲು ಹೈದರಾಬಾದ್‌ನಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಬಾಬರಿ ಮಸೀದಿಯನ್ನು ಕೆಡವಲಾಯಿತು ಎಂದರು.
‘ನಿಮ್ಮ ನಾಯಕನಿಗೆ (ರಾಹುಲ್ ಗಾಂಧಿ) ವಯನಾಡಿನ ಬದಲು ಹೈದರಾಬಾದ್‌ನಲ್ಲಿ ಚುನಾವಣೆ ಎದುರಿಸುವಂತೆ ನಾನು ಸವಾಲು ಹಾಕುತ್ತೇನೆ. ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತೀರಿ. ಅದರ ಬದಲು ಕಣಕ್ಕಿಳಿದು ನನ್ನ ವಿರುದ್ಧ ಸ್ಪರ್ಧಿಸಿ. ಕಾಂಗ್ರೆಸ್ ಆಡಳಿತದಲ್ಲಿಯೇ ಬಾಬ್ರಿ ಮಸೀದಿ ಮತ್ತು ಸೆಕ್ರೆಟರಿಯೇಟ್ ಮಸೀದಿಯನ್ನು ಕೆಡವಲಾಯಿತು’ ಎಂದು ಹೇಳಿದರು.
ತಿಂಗಳ ಆರಂಭದಲ್ಲಿ ನಡೆದ ಕಾಂಗ್ರೆಸ್‌ನ ವಿಜಯಭೇರಿ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಬಿಜೆಪಿ, ಬಿಆರ್‌ಎಸ್ ಮತ್ತು ಎಐಎಂಐಎಂ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು, ಈ ಮೂರು ಪಕ್ಷಗಳ ವಿರುದ್ಧ ಕಾಂಗ್ರೆಸ್ ಹೋರಾಡುತ್ತಿದೆ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.