ನವದೆಹಲಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ತಕ್ಷಣವೇ ಜಾರಿಗೆ ಬರುವಂತೆ ‘ಝಡ್’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಈ ಕುರಿತು ಶುಕ್ರವಾರ ಟ್ವೀಟಿಸಿರುವ ಎಎನ್‌ಐ, ‘ವಿಶ್ವಾಸಾರ್ಹ ಮೂಲಗಳ ಪ್ರಕಾರ, ಭಾರತ ಸರ್ಕಾರವು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿಯ ಭದ್ರತೆಯನ್ನು ಪರಿಶೀಲಿಸಿದೆ’ ಎಂದು ತಿಳಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ಅವರಿಗೆ ಸಿಆರ್‌ಪಿಎಫ್‌ನ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಸಭೆ ಮುಗಿಸಿ ದೆಹಲಿಗೆ ತೆರಳುತ್ತಿದ್ದಾಗ ಓವೈಸಿ ಅವರ ಬೆಂಗಾವಲು ವಾಹನದ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.