ಗುವಾಹಟಿ: ಈಶಾನ್ಯ ರಾಜ್ಯಗಳಲ್ಲಿ 10ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯ ವಿಷಯವನ್ನಾಗಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಡೆಯನ್ನು ಶತಮಾನದ ಹಳೆಯ ಸಾಹಿತ್ಯ–ಸಾಂಸ್ಕೃತಿಕ ಸಂಸ್ಥೆ ಅಸ್ಸಾಂ ಸಾಹಿತ್ಯ ಸಭಾ ಮತ್ತು ಆಲ್ ಅಸ್ಸಾಂ ವಿದ್ಯಾರ್ಥಿ ಸಂಘ (ಎಎಎಸ್‌ಯು) ಟೀಕಿಸಿವೆ.
ಸ್ಥಳೀಯ ಭಾಷೆಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕೆ ಸರ್ಕಾರ ಗಮನ ಹರಿಸಬೇಕು ಎಂದು ಎಎಎಸ್‌ಯು ಒತ್ತಾಯಿಸಿದೆ.
ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದರೆ ಭವಿಷ್ಯದಲ್ಲಿ ಅಸ್ಸಾಂನ ಸ್ಥಳೀಯ ಭಾಷೆಗಳು ಅಪಾಯದ ಅಂಚಿಗೆ ಸರಿಯುತ್ತವೆ ಎಂದು ಅಸ್ಸಾಂ ಸಾಹಿತ್ಯ ಸಭಾದ ಪ್ರಧಾನ ಕಾರ್ಯದರ್ಶಿ ಜಾದವ್ ಚಂದ್ರ ಶರ್ಮಾ ಆತಂಕ ವ್ಯಕ್ತಪಡಿಸಿದರು.
‘ಕೇಂದ್ರ ಸರ್ಕಾರದ ಈ ಕ್ರಮವು ಭವಿಷ್ಯದಲ್ಲಿ ಅಸ್ಸಾಂ ಪ್ರದೇಶದ ಸ್ಥಳೀಯ ಭಾಷೆಗಳ ಉಳಿವಿಗೆ ಮಾರಕವಾಗಿವೆ. ಆದ್ದರಿಂದ ಅಸ್ಸಾಂ ಮತ್ತು ಇತರ ಮಾತೃ ಭಾಷೆಗಳ ಪರ್ಯಾಯವಾಗಿ ಹಿಂದಿಯನ್ನು ಕಡ್ಡಾಯಗೊಳಿಸುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದು ಎಎಎಸ್‌ಯು ಮುಖ್ಯ ಸಲಹೆಗಾರ ಸಮುಜ್ಜಲ್ ಕುಮಾರ್ ಭಟ್ಟಾಚಾರ್ಯ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.