ಜೋಧಪುರ: ಎಂ.ಜಿ. ಆಸ್ಪತ್ರೆಯಲ್ಲಿ ಕೋವಿಡ್–19 ಚಿಕಿತ್ಸೆ ಪಡೆಯುತ್ತಿದ್ದ ಸ್ವಘೋಷಿತ ದೇವಮಾನವ ಅಸಾರಾಂ ಅವರನ್ನು ಭದ್ರತೆಯ ಕಾರಣಕ್ಕಾಗಿ ಜೋಧಪುರದ ಏಮ್ಸ್‌ಗೆ ಸ್ಥಳಾಂತರ ಮಾಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಎಂ.ಜಿ. ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಇದ್ದ ಕಾರಣ ಬುಧವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹದಿಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾರಣಕ್ಕಾಗಿ ಅಸಾರಾಂ ಅವರಿಗೆ ಜೈಲುಶಿಕ್ಷೆ ವಿಧಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.