ಗುವಾಹಟಿ: ಬಿಜೆಪಿ–ಎಜಿಪಿ ಮೈತ್ರಿಯು ಗುವಾಹಟಿ ಮಹಾನಗರ ಪಾಲಿಕೆ (ಜಿಎಂಸಿ) ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಒಟ್ಟು 60 ವಾರ್ಡ್‌ಗಳ ಪೈಕಿ ಬಿಜೆಪಿ ಮತ್ತು ಮೈತ್ರಿ ಪಕ್ಷವು 58 ವಾರ್ಡ್‌ಗಳನ್ನು ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಬಹುಮತ ದಾಖಲಿಸಿದೆ.
ಒಂದು ವಾರ್ಡ್‌ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಮತ್ತೊಂದು ವಾರ್ಡ್‌ನಲ್ಲಿ ಅಸ್ಸಾಂ ಜಾತೀಯ ಪರಿಷತ್ (ಎಜೆಪಿ) ಗೆಲುವು ಸಾಧಿಸಿದ್ದರೆ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷವು ಶೂನ್ಯ ಸಾಧನೆಯೊಂದಿಗೆ ದೂಳೀಪಟವಾಗಿದೆ. ಅಸ್ಸಾಂ ಚುನಾವಣಾ ಆಯೋಗವು ಭಾನುವಾರ ಜಿಎಂಸಿ ಚುನಾವಣೆ ಫಲಿತಾಂಶ ಪ್ರಕಟಿಸಿದೆ.
ಬಿಜೆಪಿ 52 ವಾರ್ಡ್‌ಗಳಲ್ಲಿ ಹಾಗೂ ಮೈತ್ರಿ ಪಕ್ಷ ಅಸ್ಸಾಂ ಗಣ ಪರಿಷತ್ (ಎಜಿಪಿ) ಆರು ವಾರ್ಡ್‌ಗಳಲ್ಲಿ ಜಯಭೇರಿ ದಾಖಲಿಸಿವೆ.
ಜಿಎಂಸಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿಗೆ ಮತದಾನಕ್ಕಾಗಿ ಇವಿಎಂ ಯಂತ್ರಗಳನ್ನು ಬಳಸಲಾಗಿತ್ತು. ಒಟ್ಟಾರೆ ಶೇಕಡ 52.80ರಷ್ಟು ಮತದಾನ ದಾಖಲಾಗಿತ್ತು. ಒಟ್ಟು 197 ಅಭ್ಯರ್ಥಿಗಳು ಕಣದಲ್ಲಿದ್ದರು.
ಜನರು ನೀಡಿರುವ ಆದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿ ಟ್ವೀಟಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸಹ ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷವನ್ನು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.