ADVERTISEMENT

ಅಸ್ಸಾಂ: ಗಡಿ ಹಿಂಸಾಚಾರದಲ್ಲಿ ಪೊಲೀಸರ ಸಾವು– ಮೂರು ದಿನ ಶೋಕಾಚರಣೆ

ಪಿಟಿಐ
Published 27 ಜುಲೈ 2021, 8:27 IST
Last Updated 27 ಜುಲೈ 2021, 8:27 IST
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ   

ಗುವಾಹಟಿ: ಮಿಜೋರಾಂನೊಂದಿಗಿನ ಗಡಿ ಸಂಘರ್ಷದಲ್ಲಿ ಅಸ್ಸಾಂನ ಐವರು ಪೊಲೀಸ್‌ ಸಿಬ್ಬಂದಿ ಮತ್ತು ನಾಗರಿಕರೊಬ್ಬರು ಮೃತಪಟ್ಟಿದ್ದು, ಇವರ ಗೌರವಾರ್ಥ ಅಸ್ಸಾಂ ಸರ್ಕಾರವು ಮಂಗಳವಾರದಿಂದ ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಿದೆ.

ಈ ಅವಧಿಯಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು. ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರದಲ್ಲಿ ಅಸ್ಸಾಂನ ಆರು ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ADVERTISEMENT

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹುತಾತ್ಮ ಪೊಲೀಸ್‌ ಸಿಬ್ಬಂದಿಗೆ ಪುಷ್ಪನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.