ADVERTISEMENT

Assam Flood | ತೀವ್ರ ಪ್ರವಾಹ; 24.50 ಲಕ್ಷ ಜನ ಸಂಕಷ್ಟದಲ್ಲಿ

ಪಿಟಿಐ
Published 6 ಜುಲೈ 2024, 8:13 IST
Last Updated 6 ಜುಲೈ 2024, 8:13 IST
<div class="paragraphs"><p>ಅಸ್ಸಾಂ ಪ್ರವಾಹ</p></div>

ಅಸ್ಸಾಂ ಪ್ರವಾಹ

   

(ಪಿಟಿಐ ಚಿತ್ರ)

ಗುವಾಹಟಿ: ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ 30 ಜಿಲ್ಲೆಗಳಲ್ಲಿ ಸುಮಾರು 24.50 ಲಕ್ಷ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಲವು ಪ್ರದೇಶಗಳಲ್ಲಿ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರವಾಹ, ಭೂಕುಸಿತ, ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಲ್ಲಿ ಈವರೆಗೆ ಒಟ್ಟು 64 ಮಂದಿ ಮೃತಪಟ್ಟಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಶುಕ್ರವಾರ ತಡರಾತ್ರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ‘ದಿಬ್ರುಗಢದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ, ನಾವು ಅಸ್ಸಾಂ ಆರೋಗ್ಯ ನಿಧಿ-ಆರೋಗ್ಯ ಹಣಕಾಸು ನೆರವು ಯೋಜನೆ ಸೇರಿದಂತೆ ಹಲವಾರು ವಿಷಯಗಳನ್ನು ಪರಿಶೀಲಿಸಿದ್ದೇವೆ. ಈಗಿರುವ ಯಾವುದೇ ಯೋಜನೆಗೆ ಒಳಪಡದವರ ಅರ್ಜಿಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ಹೇಳಿದ್ದಾರೆ.

ನಿಮತಿಘಾಟ್, ಗುವಾಹಟಿ, ಗೋಲ್ಪಾರಾ ಮತ್ತು ಧುಬ್ರಿಯಲ್ಲಿ ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೆ, ಬರಾಕ್ ನದಿ ಮತ್ತು ಇತರ ಉಪನದಿಗಳು ಕೂಡ ಹಲವು ಪ್ರದೇಶಗಳಲ್ಲಿ ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

ಪ್ರವಾಹದಿಂದಾಗಿ ರಾಜ್ಯದ ಸುಮಾರು 225 ರಸ್ತೆಗಳು ಮತ್ತು 10 ಸೇತುವೆಗಳು ಹಾನಿಯಾಗಿವೆ. ಈವರೆಗೆ ರಾಜ್ಯದ 47,103 ಸಂತ್ರಸ್ತರಿಗೆ 612 ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.