ADVERTISEMENT

ಅಸ್ಸಾಂ: ಸುಧಾರಿಸಿದ ಪ್ರವಾಹ ಪರಿಸ್ಥಿತಿ

ಪಿಟಿಐ
Published 24 ಜೂನ್ 2024, 16:13 IST
Last Updated 24 ಜೂನ್ 2024, 16:13 IST
<div class="paragraphs"><p>ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಹಲವಾರು ಕಟ್ಟಡಗಳು ಜಲಾವೃತವಾಗಿದ್ದವು </p></div>

ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಹಲವಾರು ಕಟ್ಟಡಗಳು ಜಲಾವೃತವಾಗಿದ್ದವು

   

– ಪಿಟಿಐ ಚಿತ್ರ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿಯು ಸೋಮವಾರ ಸ್ವಲ್ಪ ಮಟ್ಟಿಗೆ ಸುಧಾರಿಸಿದ್ದು, ಪ್ರಮುಖ ನದಿಗಳ ನೀರಿನ ಮಟ್ಟ ಇಳಿಕೆಯಾಗಿದೆ. 

ADVERTISEMENT

‘ಪ್ರವಾಹದಿಂದಾಗಿ ರಾಜ್ಯದ 9 ಜಿಲ್ಲೆಗಳಲ್ಲಿನ 2.07 ಲಕ್ಷ ಜನ ನಿರಾಶ್ರಿತರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕರೀಂಗಂಜ್‌ನಲ್ಲಿ ಕುಶಿಯಾರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಇತರ ಪ್ರಮುಖ ನದಿಗಳ ನೀರಿನ ಮಟ್ಟ ಇಳಿಕೆಯಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.