ADVERTISEMENT

ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಸಿಂಧುತ್ವ | ಅ. 17ರಂದು ಸುಪ್ರೀಂ ಕೋರ್ಟ್ ವಿಚಾರಣೆ

ಪಿಟಿಐ
Published 20 ಸೆಪ್ಟೆಂಬರ್ 2023, 14:00 IST
Last Updated 20 ಸೆಪ್ಟೆಂಬರ್ 2023, 14:00 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಅಸ್ಸಾಂನ ಅಕ್ರಮ ವಲಸಿಗರಿಗೆ ಸಂಬಂಧಿಸಿದಂತೆ ಪೌರತ್ವ ಕಾಯ್ದೆಯ ‘ಸೆಕ್ಷನ್‌ 6ಎ’ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌, ಅಕ್ಟೋಬರ್‌ 17ರಂದು ನಡೆಸಲಿದೆ. 

ಈ ಸೆಕ್ಷನ್‌ನಡಿ ವಲಸಿಗರಿಗೆ ಪೌರತ್ವಕ್ಕೆ ಅವಕಾಶ ಕಲ್ಪಿಸಿರುವುದರಿಂದ ಅಸ್ಸಾಂನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಳವಾಗಿದೆ ಎಂದು ದೂರಿ 17 ಅರ್ಜಿಗಳು ಸಲ್ಲಿಕೆಯಾಗಿವೆ.

ADVERTISEMENT

1985ರ ಅಸ್ಸಾಂ ಒ‍ಪ್ಪಂದದ ಅನುಸಾರ 1966ರ ಜನವರಿ 1ರಿಂದ 1971ರ ಮಾರ್ಚ್‌ 25ರೊಳಗೆ ಬಾಂಗ್ಲಾದೇಶ ಸೇರಿದಂತೆ ನಿರ್ದಿಷ್ಟಪಡಿಸಿದ ಪ್ರದೇಶದಿಂದ ಅಸ್ಸಾಂಗೆ ವಲಸೆ ಬಂದವರನ್ನು ಅಲ್ಲಿನ ನಿವಾಸಿಗಳೆಂದು ಪರಿಗಣಿಸಲಾಗುತ್ತದೆ. ಅವರು ಕಾಯ್ದೆಯ ಸೆಕ್ಷನ್‌ 18ರ ಅಡಿ ಪೌರತ್ವಕ್ಕೆ ನೋಂದಣಿ ಮಾಡಿಕೊಳ್ಳಬೇಕಿದೆ.‌ ನಿಗದಿಪಡಿಸಿರುವ ಈ ಅವಧಿಯ ಬಳಿಕ ವಲಸೆ ಬಂದವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುತ್ತದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಎಂ.ಎಂ. ಸುಂದರೇಶ್‌, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.