ಗುವಾಹಟಿ: ‘ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಇದುವರೆಗೆ 1,800ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಹೇಳಿದ್ದಾರೆ.
‘ಬಂಧನ ಕಾರ್ಯಾಚರಣೆಯು ಶುಕ್ರವಾರ ಬೆಳಿಗ್ಗೆ ಆರಂಭವಾಗಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ಮುಂದುವರಿಯಲಿದೆ’ ಎಂದೂ ಅವರು ಸುದ್ದಿಗಾರರಿಗೆ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟವು ಜನವರಿ 23ರಂದು ಬಾಲ್ಯವಿವಾಹ ಪ್ರಕರಣಗಳ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು 4,004 ಬಾಲ್ಯ ವಿವಾಹ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.