ADVERTISEMENT

ಅಸ್ಸಾಂ: ಮೂವರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2024, 14:47 IST
Last Updated 17 ಜುಲೈ 2024, 14:47 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸಿಲಚರ್ (ಅಸ್ಸಾಂ): ಅಸ್ಸಾಂ ರಾಜ್ಯದ ಕಛಾಡ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಉಗ್ರಗಾಮಿಗಳ ನಡುವೆ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಮೂವರು ಹಮಾರ್ ಉಗ್ರಗಾಮಿಗಳು ಮೃತಪಟ್ಟಿದ್ದಾರೆ ಹಾಗೂ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ನಸುಕಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಛಾಡ್ ಪೊಲೀಸರು ಅಸ್ಸಾಂ ಹಾಗೂ ನೆರೆಯ ಮಣಿಪುರದ ಮೂವರು ಹಮಾರ್ ಉಗ್ರಗಾಮಿಗಳನ್ನು ಹತ್ಯೆ ಮಾಡಿದ್ದಾರೆ. ಅಲ್ಲದೆ, ಪೊಲೀಸರು ಎರಡು ಎ.ಕೆ. ಬಂದೂಕುಗಳನ್ನು, ಇನ್ನೊಂದು ಬಂದೂಕು ಹಾಗೂ ಪಿಸ್ತೂಲನ್ನು ವಶಪಡಿಸಿಕೊಂಡಿದ್ದಾರೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಎಕ್ಸ್‌ ಮೂಲಕ ತಿಳಿಸಿದ್ದಾರೆ.

ADVERTISEMENT

ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಗುವಾಹತಿಯಲ್ಲಿ ಇರುವ ಅಸ್ಸಾಂ ಪೊಲೀಸ್ ಮುಖ್ಯ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಆದರೆ, ಈ ಬಗ್ಗೆ ಕಛಾಡ್ ಜಿಲ್ಲಾ ಪೊಲೀಸರಿಂದ ವರದಿ ಇನ್ನಷ್ಟೇ ಬರಬೇಕಿದೆ’ ಎಂದು ಅವರು ಹೇಳಿದ್ದಾರೆ.

ಪೊಲೀಸರು ಮೂವರು ಉಗ್ರರನ್ನು ಬಂಧಿಸಿದ್ದಾರೆ, ಅವರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಬಹಿರಂಗವಾಗಿಲ್ಲ ಎಂದು ಮೂಲಗಳು ಹೇಳಿವೆ. ‘ಉಗ್ರರು ಇದ್ದ ಆಟೊರಿಕ್ಷಾದಿಂದ ಒಂದಿಷ್ಟು ಶಸ್ತ್ರಾಸ್ತ್ರಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವರ ಸಹಚರರನ್ನು ಅರಸಿ ಪೊಲೀಸರು ಈ ಮೂವರನ್ನು ಭಬನ್ ಹಿಲ್ಸ್ ಪ್ರದೇಶಕ್ಕೆ ಕರೆದೊಯ್ದಿದ್ದರು. ಆಗ ಗುಂಡಿನ ಚಕಮಕಿ ನಡೆದಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.