ಗುವಾಹಟಿ: ಮತ ಎಣಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಆಂಚಲಿಕ್ ಗಣ ಮೋರ್ಚಾ (ಎಜಿಎಂ) ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಪಕ್ಷದ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಅಜಿತ್ ಕುಮಾರ್ ಭೂಯನ್ ಅವರು ಪತ್ರ ಬರೆದಿದ್ದಾರೆ. 'ಮತಎಣಿಕೆಗೆ ಚುನಾವಣಾ ಆಯೋಗವು ಸಂಪೂರ್ಣವಾಗಿ ರಾಜ್ಯ ಸರ್ಕಾರಿ ನೌಕರರ ಮೇಲೆ ಅವಲಂಬಿತವಾಗಿದೆ. ಸರ್ಕಾರಿ ನೌಕರರಲ್ಲಿ ಹಲವರು ಬಿಜೆಪಿ ಬೆಂಬಲಿಗರಿದ್ದಾರೆ. ಅವರು ಎಣಿಕೆ ವೇಳೆ ವಂಚನೆ ಎಸಗುವ ಅಪಾಯವಿದೆ. ಹೀಗಾಗಿ ಮತ ಎಣಿಕೆಯ ವಿಡಿಯೊ ಚಿತ್ರೀಕರಣ ಮಾಡಬೇಕು. 1961ರ ಚುನಾವಣಾ ನಿಯಮಗಳಲ್ಲಿ ಇದಕ್ಕೆ ಅವಕಾಶವಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.