ADVERTISEMENT

ಅಸ್ಸಾಂನಲ್ಲಿ ಧಾರಾಕಾರ ಮಳೆ: 4 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

ಪಿಟಿಐ
Published 21 ಜೂನ್ 2024, 10:54 IST
Last Updated 21 ಜೂನ್ 2024, 10:54 IST
<div class="paragraphs"><p> ಧಾರಾಕಾರ ಮಳೆ ಸುರಿಯಿತು&nbsp; (ಸಾಂಕೇತಿಕ ಚಿತ್ರ)</p></div>

ಧಾರಾಕಾರ ಮಳೆ ಸುರಿಯಿತು  (ಸಾಂಕೇತಿಕ ಚಿತ್ರ)

   

ಪ್ರಜಾವಾಣಿ ಚಿತ್ರ

ಗುವಾಹಟಿ: ಅಸ್ಸಾಂನಲ್ಲಿ ಶುಕ್ರವಾರವೂ ಧಾರಾಕಾರ ಮಳೆ ಮುಂದುವರೆದಿದ್ದು, ಹಲವು ಜಿಲ್ಲೆಗಳ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ADVERTISEMENT

ಮತ್ತೊಂದೆಡೆ ಮುಂದಿನ ಎರಡು ದಿನಗಳವರೆಗೆ ಅಸ್ಸಾಂನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಕೊಪಿಲಿ, ಬರಾಕ್ ಮತ್ತು ಕುಶಿಯಾರ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿಗಳು ತಿಳಿಸಿವೆ. 

ಕರೀಂಗಂಜ್ ಜಿಲ್ಲೆಯಲ್ಲಿ ಅತಿಹೆಚ್ಚು 2.5 ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಹದಲ್ಲಿ ಸಿಲುಕಿದ್ದಾರೆ. ದರಂಗ ಮತ್ತು ತಾಮುಲಪುರ ಜಿಲ್ಲೆಗಳಲ್ಲೂ ಹೆಚ್ಚಿನ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಸ್ಸಾಂನಲ್ಲಿ ಈ ವರ್ಷದಲ್ಲಿ ನಡೆದ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದ ಘಟನೆಗಳಲ್ಲಿ ಒಟ್ಟಾರೆ 36 ಮಂದಿ ಬಲಿಯಾಗಿದ್ದಾರೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗಾಗಿ 100ಕ್ಕೂ ಹೆಚ್ಚು ಶಿಬಿರಗಳನ್ನು ತೆರೆಯಲಾಗಿದ್ದು, ಅಲ್ಲಿ 14,000 ಮಂದಿ ಆಶ್ರಯ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.