ಹೈದರಾಬಾದ್: ನವದೆಹಲಿಯ ನೂತನ ಸಂಸತ್ ಭವನಕ್ಕೆ ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ವಿದ್ಯುತ್ ತಿದ್ದುಪಡಿ ಮಸೂದೆ 2022 ಅನ್ನು ವಿರೋಧಿಸಿ ತೆಲಂಗಾಣ ವಿಧಾನಸಭೆಯಲ್ಲಿ ಮಂಗಳವಾರ ಎರಡು ನಿರ್ಣಯಗಳನ್ನು ಅಂಗೀಕರಿಸಲಾಯಿತು.
ಐ.ಟಿ ಹಾಗೂ ಕೈಗಾರಿಕಾ ಸಚಿವ ಕೆ.ಟಿ. ರಾಮರಾವ್ ಅವರು ನಿರ್ಣಯ ಮಂಡಿಸಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಿದರು.
ಈ ನಿರ್ಣಯ ಅಂಗೀಕರಿಸಿದ್ದಕ್ಕೆ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಧನ್ಯವಾದ ಹೇಳಿದ್ದಾರೆ. ಎಐಎಂಐಎಂ ಶಾಸಕ ಅಹ್ಮದ್ ಬಲಾಲ ಅವರು ನಿರ್ಣಯಕ್ಕೆ ಬೆಂಬಲ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.