ADVERTISEMENT

ಪಂಚ ರಾಜ್ಯಗಳಲ್ಲಿ ಮತದಾರರು ಕುಟುಂಬ ರಾಜಕಾರಣ ತಿರಸ್ಕರಿಸಿದ್ದಾರೆ: ಬಿಜೆಪಿ

ಐಎಎನ್ಎಸ್
Published 10 ಮಾರ್ಚ್ 2022, 8:02 IST
Last Updated 10 ಮಾರ್ಚ್ 2022, 8:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆಯ ಆರಂಭಿಕ ಟ್ರೆಂಡ್ ಅನ್ನು ಗಮನಿಸುತ್ತಿದ್ದರೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇದು ಕುಟುಂಬ ರಾಜಕಾರಣವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿ ನೀಡಿದ್ದ ಕರೆಗೆ, ಮತದಾರರು ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ಹೇಳಿದೆ.

ಬಿಜೆಪಿ ರಾಜ್ಯಸಭಾ ಸದಸ್ಯ ವಿನಯ್ ಸಹಸ್ರಬುದ್ಧೆ ಟ್ವೀಟ್ ಮಾಡಿ, ಅಂತಿಮ ಫಲಿತಾಂಶ ಇನ್ನೂ ಘೋಷಣೆಯಾಗಬೇಕಿದೆ. ಆದರೆ, ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಮತದಾರರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಟುಂಬ ರಾಜಕಾರಣದ ಹಿನ್ನೆಲೆಯನ್ನು ಹೊಂದಿದ್ದ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಎಸ್‌ಪಿ ಹಾಗೂ ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಕಾಂಗ್ರೆಸ್, ಗೋವಾದಲ್ಲಿ ಟಿಎಂಸಿ ಸೋಲಿನ ಸುಳಿಯಲ್ಲಿವೆ. ಇದು ಶಿವಸೇನಾ ಮತ್ತು ಎನ್‌ಸಿಪಿಗೆ ದೊಡ್ಡ ಪಾಠವಾಗಲಿದೆ' ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲುವತ್ತ ಸಾಗಿದೆ. ಆದರೆ, ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿವೆ, ಗಣರಾಜ್ಯವನ್ನು ಕಿತ್ತೊಗೆಯಲಾಗುತ್ತಿದೆ ಇತ್ಯಾದಿ ಮಾತುಗಳನ್ನಾಡುತ್ತಾರೆ. ಆದರೆ, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವಿನತ್ತ ಸಾಗುತ್ತಿದೆ. ಇದಕ್ಕೆ, ಪರ್ಯಾಯ ಆಡಳಿತದ ಭರವಸೆ, ಆಶಾವಾದ ಮೂಡಿದೆ ಇತ್ಯಾದಿ ಎನ್ನುತ್ತಾರೆ. ಕೆಲವೊಬ್ಬರು ಸುಧಾರಿಸುವುದೇ ಇಲ್ಲ...’ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ, ನಾವು ಇತಿಹಾಸವನ್ನು ರಚಿಸುತ್ತಿದ್ದೇವೆ. ಭಾರತವು 'ಮೆಚ್ಚಿನ ಮಗ' ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿಟ್ಟಿರುವ ನಂಬಿಕೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಾಖ್ಯಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.