ನವದೆಹಲಿ: 2024ರ ಲೋಕಸಭೆ ಚುನಾವಣೆಗಳ ಸೆಮಿಫೈನಲ್ ಎಂದೇ ಪರಿಗಣಿತವಾಗಿರುವ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ.
ಚುನಾವಣೆಯಲ್ಲಿ ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ಥಾನ ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗ ನೀಡಿದ ಮಾಹಿತಿಯಂತೆ ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 161 ಹಾಗೂ ಛತ್ತೀಸಗಢದ 90 ಸ್ಥಾನಗಳಲ್ಲಿ 55ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ರಾಜಸ್ಥಾನದ 199 ಸ್ಥಾನಗಳಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ತೆಲಂಗಾಣದಲ್ಲಿ 119 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಚುನಾವಣಾ ಫಲಿತಾಂಶ–ಸಂಕ್ಷಿಪ್ತ ಮಾಹಿತಿ(ಮಧ್ಯಾಹ್ನ 1.50ರ ಗಂಟೆಯ ಟ್ರೆಂಡ್ ಪ್ರಕಾರ)
ಛತ್ತೀಸಗಢ: 90 ಕ್ಷೇತ್ರಗಳ ಪೈಕಿ ಬಿಜೆಪಿ 55, ಕಾಂಗ್ರೆಸ್ 32, ಜಿಜಿಪಿ 1, ಸಿಪಿಐ 1, ಬಿಎಸ್‌ಪಿ 1 ಕ್ಷೇತ್ರಗಳಲ್ಲಿ ಮುನ್ನಡೆ.
ಮಧ್ಯಪ್ರದೇಶ: 230 ಕ್ಷೇತ್ರಗಳ ಪೈಕಿ ಬಿಜೆಪಿ 161, ಕಾಂಗ್ರೆಸ್ 66, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ.
ರಾಜಸ್ಥಾನ: 199 ಕ್ಷೇತ್ರಗಳ ಪೈಕಿ ಬಿಜೆಪಿ 113ರಲ್ಲಿ, ಕಾಂಗ್ರೆಸ್ 70, ಸ್ವತಂತ್ರರು 8, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ.
ತೆಲಂಗಾಣ: 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ, ಬಿಆರ್‌ಎಸ್ 41, ಬಿಜೆಪಿ 8, ಎಐಎಂಐಎಂ 6, ಸಿಪಿಐ 1 ಕ್ಷೇತ್ರಗಳಲ್ಲಿ ಮುನ್ನಡೆ.
ನ.7ರಿಂದ 30ರ ಅವಧಿಯಲ್ಲಿ ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂ ಈ ಐದು ರಾಜ್ಯಗಳಿಗೆ ಚುನಾವಣೆ ನಡೆದಿತ್ತು. ಮಿಜೋರಾಂನಲ್ಲಿ ಮಾತ್ರ ಮತ ಎಣಿಕೆ ಸೋಮವಾರ (ಡಿ.4) ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.