ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಬಿಜೆಪಿ ವಾಗ್ದಾಳಿ ನಡೆಸಿದ್ದು, ನೀವು ಸಿಎಂ ಹುದ್ದೆಯ ವ್ಯಕ್ತಿಯನ್ನು ಬದಲಾಯಿಸಬಹುದು, ಆದರೆ ಆಮ್ ಆದ್ಮಿ ಪಕ್ಷದ (ಎಎಪಿ) ಸ್ವರೂಪವನ್ನಲ್ಲ ಎಂದಿದೆ.
ಸಿಎಂ ಸ್ಥಾನಕ್ಕೆ ಆತಿಶಿ ಅವರ ಹೆಸರು ಘೋಷಿಸಿರುವ ಅರವಿಂದ ಕೇಜ್ರಿವಾಲ್, ದೆಹಲಿಯನ್ನು ಹೇಗೆ ಲೂಟಿ ಮಾಡಿದ್ದಾರೆ ಎಂಬುವುದು ಜನರಿಗೆ ತಿಳಿದಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಕಿಡಿಕಾರಿದ್ದಾರೆ.
ಸರ್ಕಾರದ ಪ್ರತಿಯೊಂದು ಇಲಾಖೆಯ ಭ್ರಷ್ಟಾಚಾರದಲ್ಲಿ ಕೇಜ್ರಿವಾಲ್ ಅವರು ಭಾಗಿಯಾಗಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಯಾರೇ ಸಿಎಂ ಆದರೂ ಕೇಜ್ರಿವಾಲ್ ಅವರ 10 ವರ್ಷಗಳ ಆಡಳಿತದ ಅವಧಿಯಲ್ಲಿ ದೆಹಲಿಯನ್ನು ಹೇಗೆ ದೋಚಿಸಿದರು ಎಂದು ಜನರಿಗೆ ಉತ್ತರಿಸಬೇಕಾಗುತ್ತದೆ. ಸಿಎಂ ಸ್ಥಾನವನ್ನು ಬದಲಾಯಿಸುವುದರಿಂದ ಎಎಪಿಯ ಭ್ರಷ್ಟಾಚಾರದ ಕಳಂಕವನ್ನು ಅಳಿಸಲಾಗುವುದಿಲ್ಲ ಎಂದು ಸಚ್‌ದೇವ ಹೇಳಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.