ಲಖನೌ: ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು(ಎಐಎಂಪಿಎಲ್‌ಬಿ) ತನ್ನ ಕಾರ್ಯಕಾರಿಣಿ ಸಮಿತಿಯತುರ್ತು ಸಭೆ ಕರೆದಿದೆ.
ಸಮಿತಿಯಲ್ಲಿರುವ ಎಲ್ಲ 51 ಸದಸ್ಯರೂ ಇಂದು(ಭಾನುವಾರ) ನಡೆಯಲಿರುವ ಸಭೆಗೆ ಹಾಜರಾಗುವ ನಿರೀಕ್ಷೆಯಿದೆ. ಸುನ್ನೀ ವಕ್ಫ್ ಮಂಡಳಿ ಪ್ರತಿನಿಧಿಗಳೂ ಆಗಮಿಸಲಿದ್ದಾರೆ ಎನ್ನಲಾಗಿದೆ.
ರಾಜಕೀಯವಾಗಿ ಭಾರಿ ಮಹತ್ವ ಪಡೆದುಕೊಂಡಿರುವ ಈ ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರಿಂಕೋರ್ಟ್ ಸಂದಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 13ರಂದು ನಡೆದ ಮೊದಲ ಸಭೆಯಲ್ಲಿ ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿ ಚರ್ಚೆ ನಡೆಸಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಫ್.ಎಂ. ಇಬ್ರಾಹಿಂ ಕಲೀಫುಲ್ಲಾ ಸಭೆಯ ಯಾವುದೇ ವಿಚಾರವನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.