ನವದೆಹಲಿ:ಸುಪ್ರೀಂ ಕೋರ್ಟ್ ಅಯೋಧ್ಯೆ ತೀರ್ಪು ಪ್ರಕಟಿಸಲು ಪ್ರಾರಂಭಿಸುತ್ತಿದ್ದಂತೆಯೇ ಕೇಂದ್ರ ಗೃ ಸಚಿವ ಅಮಿತ್ ಶಾ ಅವರು ದೇಶದ ಭದ್ರತಾ ಸ್ಥಿತಿಗತಿಯನ್ನು ಮತ್ತೊಮ್ಮೆ ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪರಾಮರ್ಶೆ ಸಭೆ ನಡೆಸಿದ ಅಮಿತ್ ಶಾ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಪೊಲೀಸರು ಮತ್ತು ಆಡಳಿತ ವರ್ಗಕ್ಕೆ ಸೂಚಿಸುವಂತೆ ಸಲಹೆ ನೀಡಿದ್ದಾರೆ.
ಉತ್ತರ ಪ್ರದೇಶವೂ ಸೇರಿದಂತೆ ದೇಶದ ವಿವಿಧೆಡೆ ಕಾನೂನು ಸುವ್ಯವಸ್ಥೆ ಕಾಪಾಡಲು ವಿಸ್ತೃತ ಸಲಹೆ ಸೂಚನೆಗಳನ್ನೂ ಶಾ ನೀಡಿದ್ದಾರೆ. ಇದೇ ವೇಳೆ, ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಂಡ ಕೆಲವು ಮುಖ್ಯಮಂತ್ರಿಗಳನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಿತ್ ಭಲ್ಲಾ, ಗುಪ್ತಚರ ಇಲಾಖೆಯ ನಿರ್ದೇಶಕ ಅರವಿಂದ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.