ADVERTISEMENT

ಬಾಬಾ ಸಿದ್ದೀಕಿ ಹತ್ಯೆ: ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಪಿಟಿಐ
Published 21 ಅಕ್ಟೋಬರ್ 2024, 13:09 IST
Last Updated 21 ಅಕ್ಟೋಬರ್ 2024, 13:09 IST

ಬಾಬಾ ಸಿದ್ದೀಕಿ

ಬಾಬಾ ಸಿದ್ದೀಕಿ

ADVERTISEMENT

ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅವಧಿಯನ್ನು ಅಕ್ಟೋಬರ್ 25ರವರೆಗೆ ವಿಸ್ತರಿಸಿ ಮುಂಬೈ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾ ಪ್ರದೇಶದ ನಿರ್ಮಲ್ ನಗರದಲ್ಲಿರುವ ಶಾಸಕ ಜೀಶನ್ ಸಿದ್ದೀಕಿ ಅವರ ಕಚೇರಿ ಬಳಿ ಬಾಬಾ ಸಿದ್ದೀಕಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಪ್ರಕರಣ ಸಂಬಂಧ ಆರಂಭದಲ್ಲಿ ಹರಿಯಾಣ ನಿವಾಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23), ಉತ್ತರ ಪ್ರದೇಶ ಮೂಲದ ಧರ್ಮರಾಜ್ ಕಶ್ಯಪ್ (21), ಹರೀಶ್ ಕುಮಾರ್ ನಿಸಾದ್ (26) ಮತ್ತು ಪುಣೆ ಮೂಲದ ಪ್ರವೀಣ್ ಲೊಣಕರ್ (30) ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಆರೋಪಿಗಳನ್ನು ಇಂದು (ಸೋಮವಾರ) ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿ.ಆರ್ ಪಾಟೀಲ್ ಎದುರು ಹಾಜರುಪಡಿಸಲಾಯಿತು.

ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದ ಪೊಲೀಸರು ಹೆಚ್ಚಿನ ಕಸ್ಟಡಿಗೆ ಕೋರಿದರು. ಇದಕ್ಕೆ ನ್ಯಾಯಾಲಯ ಸಮ್ಮತಿ ನೀಡಿದೆ.

ಬಾಬಾ ಸಿದ್ದೀಕಿ ಹತ್ಯೆಯು ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಅದರಲ್ಲೂ, ಸಿದ್ದೀಕಿ ಅವರ ಹತ್ಯೆಯ ಹೊಣೆಯನ್ನು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ತಂಡ ಹೊತ್ತುಕೊಂಡಿರುವುದು ಪ್ರಕರಣವನ್ನು ಮತ್ತಷ್ಟು ನಿಗೂಢಗೊಳಿಸಿದೆ.

ಪ್ರಕರಣ ಸಂಬಂಧ ಮುಂಬೈ ಅಪರಾಧ ವಿಭಾಗದ ಪೊಲೀಸರು ಈವರೆಗೆ 10 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಶೂಟರ್‌ ಶಿವಕುಮಾರ್ ಗೌತಮ್, ಶುಭಂ ಲೋಂಕರ್ ಮತ್ತು ಮೊಹಮ್ಮದ್ ಜೀಶಾನ್ ಅಖ್ತರ್ ಪರಾರಿಯಾಗಿದ್ದಾರೆ. ಈ ಮೂವರ ವಿರುದ್ಧ ಪೊಲೀಸರು ಲುಕ್‌ಔಟ್ ನೋಟಿಸ್‌ (ಎಲ್‌ಒಸಿ) ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.