ADVERTISEMENT

ಬಾಬಾ ಸಿದ್ದೀಕಿ ಒಳ್ಳೆ ಮನುಷ್ಯ ಆಗಿರಲಿಲ್ಲ.. ಬಿಷ್ಣೋಯಿ ಗ್ಯಾಂಗ್ ಸದಸ್ಯ

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ (66) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯನೊಬ್ಬ ಸ್ಫೋಟಕ ಹೇಳಿಕೆ ನೀಡಿದ್ದಾನೆ.

ಪಿಟಿಐ
Published 19 ಅಕ್ಟೋಬರ್ 2024, 3:15 IST
Last Updated 19 ಅಕ್ಟೋಬರ್ 2024, 3:15 IST
<div class="paragraphs"><p>ಬಾಬಾ ಸಿದ್ಧಿಕಿ</p></div>

ಬಾಬಾ ಸಿದ್ಧಿಕಿ

   

ಮಥುರಾ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ (66) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯನೊಬ್ಬ ಸ್ಫೋಟಕ ಹೇಳಿಕೆ ನೀಡಿದ್ದಾನೆ.

ಬಾಬಾ ಸಿದ್ದೀಕಿ ಒಳ್ಳೆಯ ಮನುಷ್ಯನಾಗಿರಲಿಲ್ಲ. ಆತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಬಂಧ ಹೊಂದಿದ್ದ. ಅದಕ್ಕಾಗಿಯೇ ನಮ್ಮ ಸ್ನೇಹಿತರು ಆತನ ಹತ್ಯೆ ಮಾಡಿರುವುದು ಎಂದು ಯೋಗೀಶ್ ಎನ್ನುವ ಹೇಳಿದ್ದಾನೆ.

ADVERTISEMENT

ದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಜಿಮ್ ಮಾಲೀಕರೊಬ್ಬರ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಯೋಗೀಶ್, ಬಾಬಾ ಸಿದ್ದೀಕಿ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿಲ್ಲವಾದರೂ ಆತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ಯೋಗೀಶ್‌ನನ್ನು ಉತ್ತರ ಪ್ರದೇಶದ ಮಥುರಾದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಸ್ಥಳೀಯ ಮಾಧ್ಯಮಗಳ ಜೊತೆ ಮಾತನಾಡಿದ್ದ ಆತ, ಸಿದ್ದೀಕಿ ವಿರುದ್ಧ MCOCA ಕಾಯ್ದೆ ಅಡಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದರ ಅರ್ಥ ಆತ ದಾವೂದ್ ಜೊತೆ ನಂಟು ಹೊಂದಿದ್ದ. ಯಾರಾದರೂ ಇಂತಹದರಲ್ಲಿ ತೊಡಗಿಸಿಕೊಂಡಾಗ ಏನಾಗುತ್ತದೆ ಎಂಬುದನ್ನು ಸಿದ್ದೀಕಿ ಹತ್ಯೆ ಹೇಳುತ್ತದೆ ಎಂದು ಯೋಗೀಶ್‌ ಹೇಳಿದ್ದಾನೆ.

ದೆಹಲಿ ಪೊಲೀಸರು ಮಥುರಾದಲ್ಲಿ ಯೋಗೀಶನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದ ಆತನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಇನ್ನೊಂದೆಡೆ ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಪನ್ವೇಲ್​ ಮತ್ತು ಕರ್ಜತ್‌ ಪ್ರದೇಶಗಳಲ್ಲಿ ಕ್ರೈಂ ಬ್ರಾಂಚ್ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.