ಲಖನೌ: ಬಾಬರಿ ಮಸೀದಿ ನೆಲಸಮ ಪ್ರಕರಣದ ಸಂಬಂಧ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯವು ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ ಜೋಶಿ ಅವರ ಹೇಳಿಕೆಯನ್ನು ವಿಡಿಯೊ ಕಾನ್ಫರೆನ್ಸ್ಮೂಲಕ ದಾಖಲಿಸಿಕೊಂಡಿತು.
86 ವರ್ಷದ ಜೋಶಿ ಅವರ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ಎಸ್.ಕೆ.ಯಾದವ್ ನಡೆಸಿದರು. ಇದೇ ರೀತಿ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರ ಹೇಳಿಕೆಯನ್ನೂ ಶುಕ್ರವಾರ ದಾಖಲಿಸುವ ಸಂಭವವಿದೆ.
ಪ್ರಕರಣದ ವಿಚಾರಣೆ ಇನ್ನೂ ಹೇಳಿಕೆ ದಾಖಲಿಸುವ ಹಂತದಲ್ಲಿದೆ. ಒಟ್ಟು 32 ಆರೋಪಿಗಳ ಹೇಳಿಕೆಯನ್ನು ಸಿಆರ್‌ಪಿಸಿ ಅನ್ವಯ ದಾಖಲಿಸಬೇಕಾಗಿದೆ. 1992ರ ಡಿಸೆಂಬರ್ 6ರಂದು ಕರಸೇವಕರು ಮಸೀದಿಯನ್ನು ನೆಲಸಮ ಮಾಡಿ, ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸಲಾಗುವುದು ಎಂದು ಹೇಳಿಕೊಂಡಿದ್ದರು.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆ. 31ರ ರೊಳಗೆ ವಿಚಾರಣೆ ಪೂರ್ಣಗೊಳಿಸಲು ವಿಶೇಷ ನ್ಯಾಯಾಲಯ ನಿತ್ಯವೂ ವಿಚಾರಣೆ ನಡೆಸುತ್ತಿದೆ. ರಾಮಮಂದಿರ ನಿರ್ಮಾಣ ಹೋರಾಟದಲ್ಲಿ ಅಡ್ವಾಣಿ ಮತ್ತು ಜೋಶಿ ಮುಂಚೂಣಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.