ADVERTISEMENT

ಬಾಬರಿ ಪ್ರಕರಣದ ತೀರ್ಪು ನಿರೀಕ್ಷಿತ, ಆಶ್ವರ್ಯವಿಲ್ಲ: ಎನ್‌ಸಿಪಿ

ಪಿಟಿಐ
Published 30 ಸೆಪ್ಟೆಂಬರ್ 2020, 12:53 IST
Last Updated 30 ಸೆಪ್ಟೆಂಬರ್ 2020, 12:53 IST
ಬಾಬರಿ ಮಸೀದಿ ಸ್ಥಳ
ಬಾಬರಿ ಮಸೀದಿ ಸ್ಥಳ   

ಮುಂಬೈ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ಆಶ್ವರ್ಯವಿಲ್ಲ ಎಂದು ಎನ್‌ಸಿಪಿ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಆರೋಪಿಗಳನ್ನು ದೋಷಮುಕ್ತ ಎಂದು ಲಖೌನ್‌ ಸಿಬಿಐ ವಿಶೇಷ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ ಪ್ರಕರಣದ ಎಲ್ಲ 32 ಆರೋಪಿಗಳೂ ನಿರ್ದೋಷಿಗಳೆಂದು ನ್ಯಾಯಾಲಯವು ತೀರ್ಪಿನಲ್ಲಿ ಹೇಳಿದೆ.

1992ರಲ್ಲಿ ನಡೆದ ಮಸೀದಿ ಧ್ವಂಸವು ಪೂರ್ವ ನಿಯೋಜಿತವಾಗಿರಲಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

‘ಖುಲಾಸೆಗೊಂಡಿರುವ ಆರೋಪಿಗಳು ಬಿಜೆಪಿ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪಿನ ವಿರುದ್ಧ ಬಿಜೆಪಿ ನೇತೃತ್ವದ ಉತ್ತರ ಪ್ರದೇಶದ ಸರ್ಕಾರ ಉನ್ನತ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.