ADVERTISEMENT

ಫೋನಿ ಅಬ್ಬರ: ರೈಲ್ವೆ ಆಸ್ಪತ್ರೆಯಲ್ಲಿ ಹುಟ್ಟಿದ ಮಗುವಿಗೆ ಚಂಡಮಾರುತದ ಹೆಸರು

​ಪ್ರಜಾವಾಣಿ ವಾರ್ತೆ
Published 3 ಮೇ 2019, 11:27 IST
Last Updated 3 ಮೇ 2019, 11:27 IST
   

ಭುವನೇಶ್ವರ: ಒಡಿಶಾದಲ್ಲಿ ಫೋನಿ ಚಂಡಮಾರುತದ ಅಬ್ಬರ ಜೋರಾಗಿದ್ದು, ಇಲ್ಲಿನ ರೈಲ್ವೆ ಆಸ್ಪತ್ರೆಯಲ್ಲಿ ಶುಕ್ರವಾರ ಹುಟ್ಟಿದ ಹೆಣ್ಣು ಮಗುವಿಗೆ ‘ಫೋನಿ’ ಎಂದುಹೆಸರಿಡಲಾಗಿದೆ.

ರಾಜ್ಯದಲ್ಲಿ ‘ಫೋನಿ’ಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇದೇ ದಿನ ಜನಿಸಿದ ಕಾರಣ ಮಗುವಿಗೆ ಅದರ(ಚಂಡಮಾರುತದ) ಹೆಸರನ್ನು ಇಡಲಾಗಿದೆ.

ಮಗುವಿನ ತಾಯಿರೈಲ್ವೆ ಇಲಾಖೆ ಸಿಬ್ಬಂದಿಯಾಗಿದ್ದು, ಇಲ್ಲಿನ ಮಂಚೇಶ್ವರ್‌ನಲ್ಲಿರುವ ಕೋಚ್‌ ದುರಸ್ತಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದಾರೆ. ಬೆಳಗ್ಗೆ 11.03 ಗಂಟೆ ವೇಳೆಗೆ ಹೆರಿಗೆಯಾಗಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.