ADVERTISEMENT

ಪಿಎಂಎಲ್‌ಎ ಪ್ರಕರಣ: ಸೊರೇನ್‌ ನಿಕಟವರ್ತಿಗೆ ಜಾಮೀನು

ಪಿಟಿಐ
Published 28 ಆಗಸ್ಟ್ 2024, 13:58 IST
Last Updated 28 ಆಗಸ್ಟ್ 2024, 13:58 IST
supreme-court-
supreme-court-   

ನವದೆಹಲಿ: ‘ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಜಾಮೀನು ನಿರಾಕರಿಸಬೇಕು’ ಎಂಬ ಮಾತು ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣಗಳಿಗೂ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿಕಟವರ್ತಿ ಎನ್ನಲಾದ ಪ್ರೇಮ್ ಪ್ರಕಾಶ್ ಅವರಿಗೆ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿಕೊಂಡಿರುವ ‍ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ. 

ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಿಕೊಂಡಿರುವ ಪ್ರಕರಣಗಳಲ್ಲಿಯೂ ‘ಅಪರೂಪದ ಸಂದರ್ಭಗಳಲ್ಲಿ ಮಾತ್ರ ಜಾಮೀನು ನಿರಾಕರಿಸಬೇಕು’ ಎಂಬುದನ್ನು ಕೋರ್ಟ್ ಸ್ಪಷ್ಟಪಡಿಸಿದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇದ್ದ ವಿಭಾಗೀಯ ಪೀಠ ಹೇಳಿದೆ.

ADVERTISEMENT

ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 45ರಲ್ಲಿ, ಈ ಕಾಯ್ದೆಯ ಅಡಿ ದಾಖಲಾದ ಪ್ರಕರಣಗಳಲ್ಲಿ ಜಾಮೀನು ನೀಡುವಾಗ ಪಾಲಿಸಬೇಕಿರುವ ಎರಡು ಷರತ್ತುಗಳನ್ನು ಹೇಳಲಾಗಿದೆ. ಈ ಷರತ್ತುಗಳು ಕೂಡ ಹಕ್ಕನ್ನು ನಿರಾಕರಿಸುವುದೇ ಸಹಜವಾಗಬೇಕು ಎಂಬ ಮಾತನ್ನು ಹೇಳುವುದಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.