ADVERTISEMENT

ವ್ಯಾಲೆಂಟೈನ್ಸ್ ಡೇ: ಆಗ್ರಾದಲ್ಲಿ ಪ್ರೇಮಿಗಳಿಗೆ ಬಜರಂಗದಳ ಕಾರ್ಯಕರ್ತರಿಂದ ಕಿರುಕುಳ

ಪಿಟಿಐ
Published 15 ಫೆಬ್ರುವರಿ 2022, 6:26 IST
Last Updated 15 ಫೆಬ್ರುವರಿ 2022, 6:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಆಗ್ರಾ: ಪ್ರೇಮಿಗಳ ದಿನವಾದ ಸೋಮವಾರ ಆಗ್ರಾದಲ್ಲಿ ಯುವಜೋಡಿಗಳಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ರಾದ ಹರಿಪರ್ವತ್ ಪೊಲೀಸ್ ಠಾಣಾ ವ್ಯಾಪ್ತಿಯ ಪಲಿವಾಲ್ ಪಾರ್ಕ್‌ನಲ್ಲಿ ಕುಳಿತಿದ್ದ ಹುಡುಗರು ಮತ್ತು ಹುಡುಗಿಯರಿಗೆ ಬಜರಂಗದಳದ ಕಾರ್ಯಕರ್ತರು ಕಿರುಕುಳ ಕೊಟ್ಟಿದ್ದಾರೆ ಎನ್ನುವ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಾಗುವುದಕ್ಕೂ ಮೊದಲು ವೈರಲ್ ಆಗಿದ್ದ ವಿಡಿಯೊದಲ್ಲಿ, ಬಜರಂಗದಳದ ಕಾರ್ಯಕರ್ತರು ಪಾರ್ಕ್‌ಗೆ ತೆರಳಿ ಅಲ್ಲಿದ್ದ ಜೋಡಿಗಳನ್ನು ಪ್ರಶ್ನಿಸುವುದು ಕಂಡುಬಂದಿತ್ತು.

ADVERTISEMENT

ವ್ಯಾಲೆಂಟೈನ್ ಡೇ ಆಚರಿಸುವುದು ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು, ಅದಕ್ಕೆ ನಮ್ಮ ವಿರೋಧವಿದೆ ಎಂದು ಬಜರಂಗದಳ ಕಾರ್ಯಕರ್ತರು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.