ADVERTISEMENT

ಬನಾರಸ್‌ ವಿವಿ: ಮುಸ್ಲಿಂ ಪ್ರೊಫೆಸರ್ ನೇಮಕ, ಪ್ರತಿಭಟನೆ ಹಿಂಪಡೆದ ವಿದ್ಯಾರ್ಥಿಗಳು 

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2019, 6:15 IST
Last Updated 23 ನವೆಂಬರ್ 2019, 6:15 IST
   

ಬನಾರಸ್‌: ಉತ್ತರ ಪ್ರದೇಶದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಫಿರೋಜ್‌ ಖಾನ್‌ ಅವರು ಸಂಸ್ಕೃತ ಪಾಠ ಮಾಡುವುದುನ್ನು ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ವಾಪಸ್‌ ಪಡೆದಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮಧ್ಯಪ್ರವೇಶದಿಂದಾಗಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಇದನ್ನೂ ಓದಿ: ಬನಾರಸ್ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕಲಿಸಲು ಮುಸ್ಲಿಂ ಪ್ರೊಫೆಸರ್ ಬೇಡ'

ADVERTISEMENT

ಕಳೆದ 14 ದಿನಗಳ ಹಿಂದೆ ಫಿರೋಜ್ ಖಾನ್ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸಂಸ್ಕೃತ ವಿದ್ಯಾ ಧರಮ್ ವಿಗ್ಯಾನ್ ( ಎಸ್‌ವಿಡಿವಿ)ಗೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇರಿದ್ದರು. ಸಂಸ್ಕೃತದಲ್ಲಿ ಡಾಕ್ಟರೇಟ್ ಪಡೆದವರಾಗಿದ್ದಾರೆ ಫಿರೋಜ್ ಖಾನ್.

ನವೆಂಬರ್ 7ರಂದು ಖಾನ್ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ಇದನ್ನು ವಿರೋಧಿಸಿ 20 ಎಸ್‌ವಿಡಿವಿ ವಿದ್ಯಾರ್ಥಿಗಳು ಹೋಮ ಕುಂಡವನ್ನು ಮಾಡಿ ಅದರ ಸುತ್ತ ಪ್ರತಿಭಟನೆಗೆ ಕುಳಿತಿದ್ದರು.

ಶುಕ್ರವಾರ ಬನಾರಸ್‌ನ ಸ್ಥಳೀಯ ಆರ್‌ಎಸ್‌ಎಸ್‌ ನಾಯಕರು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಸೂಚಿಸಿದ್ದಾರೆ. ನೀವು ಪ್ರತಿಭಟನೆ ಮಾಡುತ್ತಿರುವುದು ತಪ್ಪು ಎಂದು ವಿದ್ಯಾರ್ಥಿಗಳಿಗೆ ಆರ್‌ಎಸ್‌ಎಸ್‌ ನಾಯಕರು ತಿಳಿ ಹೇಳಿದ್ದಾರೆ ಎನ್ನಲಾಗಿದೆ.

ಫಿರೋಜ್‌ ಖಾನ್‌ ಅವರಿಗೆ ಬಿಜೆಪಿ ಸೇರಿದಂತೆ ಆರ್‌ಎಸ್‌ಎಸ್‌ ನಾಯಕರು ಬೆಂಬಲ ನೀಡಿದ್ದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.