ಲಖನೌ: ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವೃತ್ತಿಪರ ಪದವಿ ಕೋರ್ಸ್‌ನ (ಬಿ.ವೋಕ್) ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ದನದ ಮಾಂಸದ ಕುರಿತು ಕೇಳಿರುವ ಪ್ರಶ್ನೆಯು ವಿವಾದ ಹುಟ್ಟುಹಾಕಿದೆ.
ಬಿ.ವೋಕ್‌ನ ಎರಡನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆಯಲ್ಲಿ ಕೇಟರಿಂಗ್ ಮತ್ತು ಹೋಟೆಲ್ ಮ್ಯಾನೇಜ್‌ಮೆಂಟ್ ವಿಷಯಕ್ಕೆ ಸಂಬಂಧಿಸಿ ದನದ ಮಾಂಸದ ವರ್ಗೀಕರಣಗಳ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಶ್ನೆಪತ್ರಿಕೆ ತಯಾರಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದನದ ಮಾಂಸದ ವರ್ಗೀಕರಣದ ಬಗ್ಗೆ ವ್ಯಾಖ್ಯಾನಿಸಿ ಎಂದು ಕೇಳಿರುವ ಪ್ರಶ್ನೆಯಿಂದ ಹಿಂದೂಗಳ ಭಾವನೆಗಳಿಗೆ ನೋವುಂಟಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.